ಬ್ರಹ್ಮವ ನುಡಿದಾನು ಭ್ರಮಿತನಾದೆನಯ್ಯಾ ಅದ್ವೈತವ ನುಡಿದಾನು ಅಹಂಕಾರಿಯಾದೆನಯ್ಯಾ ಶೂನ್ಯವ ನುಡಿದಾನು ಸುಖದುಃಖಕ್ಕೆ ಗುರಿಯಾದೆನಯ್ಯಾ ಸ್ಥಲಗೆಟ್ಟು ನುಡಿದಾನು ಸಂಸಾರಿಯಾದೆನಯ್ಯಾ ಗುಹೇಶ್ವರಾ ನಿಮ್ಮ ಶರಣ ಸಂಗನಬಸವಣ್ಣನ ಪ್ರಸಾದವ ಕೊಂಡು ಬದುಕಿದೆನಯ್ಯಾ.