ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು. ಲಿಂಗಸಂಬಂದ್ಥಿಯಾದಡೆ ಜಂಗಮಪ್ರೇಮಿ ನೀನಾಗು ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ ಜಂಗಮದಲ್ಲಿ ನಿರುತ ಭರಿತ ಕೂಡಲಸಂಗಮದೇವ.