ಭಕ್ತದೇಹಿಕನಪ್ಪ ದೇವನು ಸದ್ಭಕ್ತರ ಬಳಿಯಲ್ಲಿ ಬಪ್ಪನಾಗಿ ಆಳ್ದನು ಬರಲಾಳು ಮಂಚದ ಮೇಲಿಪ್ಪುದು ಗುಣವೇ ಹೇಳಾ. ಕೂಡಲಸಂಗಮದೇವಾ ಜಂಗಮರೂಪಾಗಿ ಸಂಗಯ್ಯ ಬಂದಾನೆಂದು ಎಂದೆಂದೂ ನಾನು ಮಂಚವನೇರದ ಭಾಷೆ. 396