ಭಕ್ತನಾಗಿ ಲಿಂಗ ಜಂಗಮವ ಪೂಜಿಸಬೇಕು. ಭಕ್ತನಾಗಿ ತನ್ನ ತಾ ಪೂಜಿಸಿಕೊಂಬುದು ಎಂತಯ್ಯಾ ಸ್ವಾಮಿಭೃತ್ಯಸಂಬಂಧವು ಎಂತಯ್ಯಾ ಪೂರುಸುವುದು ಕೂಡಲಸಂಗಮದೇವಾ ಕಣ್ಣಕಟ್ಟಿ ಕನ್ನಡಿಯ ತೋರುವಂತೆ ! 185