ಭಕ್ತನಾದಡೆ ಸಕಲಕರ್ಮವು ಚಿತ್ತ



Pages   (key to Page Status)   


ಭಕ್ತನಾದಡೆ ಚಿತ್ತ ನಿಶ್ಚಲವಾಗಿ ಸದ್ಭಕ್ತಿ ನೆಲೆಗೊಂಡಿರಬೇಕು. ಮಹೇಶ್ವರನಾದಡೆ ಸಕಲಕರ್ಮವು ಕ್ಷಯವಾಗಿರಬೇಕು. ಪ್ರಸಾದಿಯಾದಡೆ ಶಿವಜ್ಞಾನಪರಾಯಣನಾಗಿರಬೇಕು. ಪ್ರಾಣಲಿಂಗಿಯಾದಡೆ ನಿತ್ಯಾನಿತ್ಯವಿಚಾರವನರಿದಿರಬೇಕು. ಶರಣನಾದಡೆ ಗರ್ವ ಅಹಂಕಾರದ ಮೊಳೆಯ ಮುರಿದಿರಬೇಕು. ಐಕ್ಯನಾದಡೆ ಬ್ಥಿನ್ನಭಾವವನಳಿದು ಮಹಾಜ್ಞಾನದೊಳಗೆ ಓಲಾಡಬೇಕು. ಅದೆಂತೆಂದೊಡೆ : ``ಭಕ್ತಿಃ ಕರ್ಮಕ್ಷಯೋ ಬುದ್ಧಿರ್ವಿಚಾರೋ ದರ್ಪಸಂಕ್ಷಯಃ