ಭಕ್ತರೆಲ್ಲರೂ ಲಂದಣಿಗರಾಗಿ ಹೋಯಿತ್ತು. ಜಂಗಮಗಳೆಲ್ಲರೂ (ಜಂಗಮವೆಲ್ಲ?) ಉಪಜೀವಿಗಳಾಗಿ ಹೋದರು (ಹೋಯಿತ್ತು?). ಇದೇನೊ? ಇದೆಂತೊ? ಅರಿಯಲೆ ಬಾರದು. ಕಾಯಗುಣ ನಾಸ್ತಿಯಾದಾತ ಭಕ್ತ ಪ್ರಾಣಗುಣ ನಾಸ್ತಿಯಾದಾತ ಜಂಗಮ ಉಳಿದವೆಲ್ಲವ ಸಟೆಯೆಂಬೆ ಗುಹೇಶ್ವರಾ