ಭಕ್ತರ ಕಂಡಡೆ ಬೋಳರಪ್ಪಿರಯ್ಯಾ ಸವಣರ ಕಂಡಡೆ ಬತ್ತಲೆಯಪ್ಪಿರಯ್ಯಾ ಹಾರುವರ ಕಂಡಡೆ ಹರಿನಾಮವೆಂಬಿರಯ್ಯಾ ಅವರವರ ಕಂಡಡೆ ಅವರವರಂತೆ ಸೂಳೆಗೆ ಹುಟ್ಟಿದವರ ತೋರದಿರಯ್ಯಾ. ಕೂಡಲಸಂಗಯ್ಯನ ಪೂಜಿಸಿ ಅನ್ಯದೈವಂಗಳಿಗೆರಗಿ ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯಾ. 103