ಭಕ್ತಿಯುಕ್ತಿಯ ಹೊಲಬ ಬಲ್ಲವರ,


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಭಕ್ತಿಯುಕ್ತಿಯ ಹೊಲಬ ಬಲ್ಲವರ
ಮೂರುಲೋಕದೊಳಗಾರನೂ ಕಾಣೆ. ಲಿಂಗದಲ್ಲಿ ಭಕ್ತಿಯ ಮಾಡಿದಡೆ ಭವ ಹರಿಯದೆಂದು ಜಂಗಮಮುಖ ಲಿಂಗವೆಂದರಿದು ಅರ್ಚಿಸಿ ಪೂಜಿಸಿ ದಾಸೋಹವ ಮಾಡಿ ಪ್ರಸನ್ನತೆಯ ಹಡೆದ ಬಸವಣ್ಣನು. ಆ ಪ್ರಸನ್ನತೆಯ ರುಚಿಯನುಪಮಿಸಬಾರದು. ಆ ಬಸವಣ್ಣನ ಪ್ರಸಾದವ ಕೊಂಡು ನಾನು ಬದುಕಿದೆನು. ಆ ಬಸವಣ್ಣನ ಭಕ್ತಿಪ್ರಸಾದವ ಕೊಂಡು ಅಲ್ಲಮಪ್ರಭು ತೃಪ್ತನಾದನು. ಅಲ್ಲಮಪ್ರಭು ಕೊಂಡ ಪ್ರಸಾದದ ತೃಪ್ತಿ ಲಕ್ಷದಮೇಲೆ ತೊಂಬತ್ತಾರುಸಾವಿರ ಜಂಗಮ ತೃಪ್ತಿಯಾಯಿತು; ಆ ಲಕ್ಷದ ಮೇಲೆ ತೊಂಬತ್ತಾರುಸಾವಿರ ಜಂಗಮ ತೃಪ್ತಿಯಾದಲ್ಲಿ ಸಚರಾಚರವೆಲ್ಲ ಕೂಡೆ ತೃಪ್ತಿಯಾಯಿತ್ತೆಂದಡೆ
ಇಲ್ಲವೆಂದು ಬಿಜ್ಜರಿ ತರ್ಕಿಸಲು
ಕಪ್ಪೆಯ ಒಡಲೊಳಗೆ ಪ್ರಭುವಿನ ಪ್ರಸಾದವ ತೋರನೆ ಬಸವಣ್ಣನು ? ಇದು ಕಾರಣ ಕೂಡಲಚೆನ್ನಸಂಗಮದೇವರಲ್ಲಿ ಬಸವಣ್ಣ ಪ್ರಭುದೇವರ ಪ್ರಸಾದದ ಘನವು ತ್ರೈಲೋಕ್ಯದೊಳಗೆ ಬೆಳವಿಗೆಯಾಯಿತ್ತು !