ಭಕ್ತಿುಲ್ಲದ ಬಡವ ನಾನಯ್ಯಾ: ಕಕ್ಕಯ್ಯನ ಮನೆಯಲ್ಲೂ ಬೇಡಿದೆ ಚೆನ್ನಯ್ಯನ ಮನೆಯಲ್ಲೂ ಬೇಡಿದೆ ದಾಸಯ್ಯನ ಮನೆಯಲ್ಲೂ ಬೇಡಿದೆ. ಎಲ್ಲಾ ಪುರಾತರು ನೆರೆದು ಭಕ್ತಿಭಿಕ್ಷವನಿಕ್ಕಿದಡೆ ಎನ್ನ ಪಾತ್ರೆ ತುಂಬಿತ್ತು ಕೂಡಲಸಂಗಮದೇವಾ.