ಭಕ್ತಿ ಸುಭಾಷೆಯ ನುಡಿಯ ನುಡಿವೆ ನುಡಿದಂತೆ ನಡೆವೆ ನಡೆಯೊಳಗೆ ನುಡಿಯ ಪೂರೈಸುವೆ. ಮೇಲೆ ತೂಗುವ ತ್ರಾಸು ಕಟ್ಟಳೆ ನಿಮ್ಮ ಕೈಯಲ್ಲಿ. ಒಂದು ಜವೆ ಕೊರತೆಯಾದಡೆ ಎನ್ನನದ್ದಿ ನೀನೆದ್ದು ಹೋಗು ಕೂಡಲಸಂಗಮದೇವಾ. 441