Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಭಕ್ತ
ಭೃತ್ಯನಾಗಿ ಮಾಡುವ ಮಾಟದಲ್ಲಿ ವಿಚಾರವುಂಟಯ್ಯಾ
ಅದೆಂತೆಂದರೆ:ಸಂಸಾರಚ್ಛೇದನೆಯುಳ್ಳರೆ ಜಂಗಮಲಿಂಗವಹುದು
ಅದಕ್ಕೆ ಮಾಡಿದ ಫಲಂ ನಾಸ್ತಿ. ಸಂಸಾರಚ್ಛೇದನೆ ಇಲ್ಲದಿದ್ದರೆ ಆ ಜಂಗಮ ಭವಭಾರಿಯಹನು. ಅದಕ್ಕೆ ಮಾಡಿದಲ್ಲಿ ಫಲವುಂಟು. ಫಲವುಂಟಾದಲ್ಲಿ ಭವ ಉಂಟು
ಫಲವಿಲ್ಲದಲ್ಲಿ ಭವವಿಲ್ಲ. `ಮನದಂತೆ ಮಂಗಳ' ಎಂಬ ಶ್ರುತಿಯ ದಿಟವ ಮಾಡಿ
ಈ ಉಭಯದೊಳಗೆ ಆವುದ ಪ್ರಿಯವಾಗಿ ಮಾಡುವರು ಅಹಂಗೆ ಇಹರು ಕಾಣಾ ಕೂಡಲಚೆನ್ನಸಂಗಮದೇವಾ