ಭವತಿಮಿರವೆಂಬ ಅಜ್ಞಾನದಿಂದ ಮುಸುಕಿಕೊಂಡು ಕಾಣಬಾರದೆಯಿದ್ದ ಕಣ್ಣಿಂಗೆ ಜ್ಞಾನವೆಂಬ ಅಂಜನವನೆಚ್ಚು ಶಿವಪಥವಿದೆಂದು ತೋರಿಸಿದ ಸದ್ಗುರುದೇವಂಗೆ ನಮೋನಮೊಯೆಂಬೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.