ಭವಭವದಲ್ಲಿ ನಿಮ್ಮ ಜಂಗಮವೆ ಶರಣಯ್ಯಾ. ಅವರುಂಡು ಮಿಕ್ಕುದ ಉಡುಗಿ ಒಕ್ಕಪ್ರಸಾದವನಾಯ್ದುಕೊಂಬ ಮರುಳ ನಾನಯ್ಯಾ. ನಮ್ಮ ಕೂಡಲಸಂಗನ ಶರಣರ ರಿಣವ ನಾ ಹಿಂಗಲಾರೆ. 472