ಭವವಿರಹಿತಂಗೆ ಭಕ್ತಿಯ ಮಾಡುವರು ನೀವು ಕೇಳಿರಣ್ಣಾ ಭವದ ಬಾಧೆಯೊಳಗೆ ನೀವಿದ್ದು ಅಭವಭಕ್ತಿಯ ಮಾಡುವ ಪರಿಯಂತೊ ? ತಾನಭವನಾದಲ್ಲದೆ ಸಹಜಭಕ್ತಿಯ ಮಾಡಬಾರದು ಗುಹೇಶ್ವರಾ.