Pages(key to [[Help:Page Status{{!}}Page Status]])
ಭವಿಯ ತಂದು ಭಕ್ತನ ಮಾಡಿ ಪೂರ್ವಾಶ್ರಯವ ಕಳೆದ ಬಳಿಕ ಮರಳಿ ಪೂರ್ವಾಶ್ರಯವನೆತ್ತಿ ನುಡಿವ ಗುರುದ್ರೋಹಿಯ ಮಾತ ಕೇಳಲಾಗದು. ಹೆಸರಿಲ್ಲದ ಲಿಂಗಕ್ಕೆ ಹೆಸರಿಡುವ ಲಿಂಗದ್ರೋಹಿಯ ಮಾತ ಕೇಳಲಾಗದು. ಪೂರ್ವದಲ್ಲಿ ನಾಮವಿಲ್ಲದ ಗುರು ಹೆಸರಿಲ್ಲದ ಲಿಂಗ ಹೆಸರಿಲ್ಲದ ಶಿಷ್ಯ_ ಈ ತ್ರಿವಿಧಸ್ಥಲವನರಿಯದೆ ಕೆಟ್ಟರು ಗುಹೇಶ್ವರಾ.