ಭಾವ ಸದ್ಭಾವ ನಿರ್ಭಾವವೆಂಬ ತ್ರಿಪುಟಿಭಾವವಾವುದೆಂದಡೆ: ಜಡವಹ ತನ್ನನ್ನು ಅಜಡವಹ ಮನಸ್ಸಿನಿಂದಲೆ ತದೇಕ ನಿಷೆ*ಯಿಂದ ಭಾವಿಸೂದೀಗ ಭಾವವು. ಸದ್ಭಾವವೆಂದಡೆ: ಜಡವಾಗಿ ದೃಶ್ಯವಲ್ಲದ ಅಜಡವಾಗಿ ಅದೃಶ್ಯವಲ್ಲದ ಜಡಾಜಡ ಸಮ್ಮಿಶ್ರವಲ್ಲದ ಭಾವವ ಭಾವಿಸೂದೆ ಸದ್ಭಾವವು. ನಿರ್ಭಾವವೆಂದಡೆ:ಭಾವ ಸದ್ಭಾವವೆರಡಳಿದು ವಾಚಿಕ ಅವಾಚಿಕವಾಗಿಹುದಾಗಿ ನಿರ್ಭಾವವು. ಇಂತೀ ಭಾವ ಸದ್ಭಾವ ನಿರ್ಭಾವವೆಂಬ ತ್ರಿಪುಟಿಭಾವವಳಿದುಳಿದ ಮಹಾಘನವು ತಾನೆ; ಶ್ರೀಗುರುವಾದ
ಲಿಂಗವಾದ
ಜಂಗಮವಾದ. ಇಂತೀ ತ್ರಿವಿಧದ ಪಾದೋದಕ ಪ್ರಸಾದದಲ್ಲಿ ಪರಿಣಾಮಿ ಗುಹೇಶ್ವರಾ ನಿಮ್ಮ ಶರಣ.