ಭುವರ್ಲೋಕದ ಸ್ಥಾವರಕ್ಕೆ ಸತ್ಯಲೋಕದ ಅಗ್ಘಣಿಯಲ್ಲಿ ಮಜ್ಜನಕ್ಕೆರೆದು ದೇವಲೋಕದ ಪುಷ್ಪದಲ್ಲಿ ಪೂಜೆಯ ಮಾಡಿದಡೆ ಹತ್ತು ಲೋಕದಾಚಾರ ಕೆಟ್ಟಿತ್ತು. ಮೂರು ಲೋಕದರಸುಗಳು ಮುಗ್ಧರಾದರು. ಗುಹೇಶ್ವರಲಿಂಗವು ಸ್ಥಾವರಕ್ಕೆ ಸ್ಥಾವರವಾದನು.