ಭೂತ ಒಲಿದು ಆತ್ಮನ ಸೋಂಕಿದ ಬಳಿಕ ಭೂತದ ಗುಣವಲ್ಲದೆ ಆತ್ಮನ ಗುಣವುಂಟೆ ಗುರುಕಾರುಣ್ಯವಾಗಿ ಹಸ್ತಮಸ್ತಕಸಂಯೋಗವಾದ ಬಳಿಕ ಗುರುಲಿಂಗಜಂಗಮವೆ ಗತಿಯಾಗಿ ಇದ್ದೆ ಕೂಡಲಸಂಗಮದೇವಾ.