ಭೂಮಿಯ ಕಠಣವನು ಆಕಾಶದ ಮೃದುವನು; ತಿಳಿವ ಗಮನ ಅಲ್ಲಿಯೇ ನಿಂದಿತ್ತು. ಉದಕದೊಳಗೆ ಹುಟ್ಟಿದ ತೃಷ್ಣೆ ಉದಕವನರಸಿತ್ತಲ್ಲಾ! ಒಳಗೆ ಸತ್ತು ಹೊರಗೆ ಆಡುತ್ತದೆ ! ಗುಹೇಶ್ವರ ಬೆರಗಾಗಿ ಅಲ್ಲಿಯೇ ನಿಂದನು.