- <ಮಂಕುತಿಮ್ಮನ ಕಗ್ಗ
- <ಮಂಕುತಿಮ್ಮನ ಕಗ್ಗ-ಕಂತು ೧.
- <ಮಂಕುತಿಮ್ಮನ ಕಗ್ಗ-ಕಂತು ೨; ಪದ್ಯ ೩೧ ರಿಂದ ೬೦-[ಮೊದಲ ಸಾಲು.]
- ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? |
- ನಚ್ಚುವುದೆ ಮರೆಯೋಲಿಹುದನೆ ಸತ್ಯವೆಂದು ? ||
- ಅಚ್ಚರಿಯ ತಂತ್ರವಿದು ಬ್ರಹ್ಮ ಸೃಷ್ಟಿಗಳೇಕೋ |
- ಮುಚ್ಚಿಹವು ಸಾಜತೆಯ- ಮಂಕುತಿಮ್ಮ ||
- ನಚ್ಚುವುದು = ನೆಚ್ಚುವುದು, ನಂಬುವುದು, ಇಹುದನೆ = ಇರುವುದನ್ನು , ಸಾಜತೆಯ = ಸಹಜತೆಯ.
- ಸತ್ಯವಾದ ಆ ಪರಮಾತ್ಮವಸ್ತು ಅಸತ್ಯವಾದ ಈ ಸೃಷ್ಟಿಯ ಹಿಂದೆ ಬಚ್ಚಿಟ್ಟುಕೊಂಡಿರುವುದೇ? ಜಗತ್ತು ಕಾಣುತ್ತದೆ. ಇಂದ್ರಿಯ ಗ್ರಾಹ್ಯ. ಇದನ್ನು ಮಿಥ್ಯವೆಂದು ಅಸಥ್ಯವೆಂದು ಹೇಳುತ್ತಾರೆ. ಆದರೆ ಅದನ್ನು ಸೃಜಿಸಿದ ಶಕ್ತಿ ಕಾಣುವುದಿಲ್ಲ. ಭಾವಿಸಬಹುದು ಮತ್ತು ಕೇವಲಅನುಭವ ವೇಧ್ಯ. ಅದನ್ನು ಸತ್ಯವೆನ್ನುತ್ತಾರೆ.ಕಣ್ಣಿಗೆ ಕಾಣದೆ, ಮರೆಯಲ್ಲಿರುವುದನ್ನು ಸತ್ಯವೆಂದು ನಂಬುವುದು ಹೇಗೆ. ಈ ಸೃಷ್ಟಿಕರ್ತ ಮತ್ತು ಅವನ ಸೃಷ್ಟಿಯ ತಂತ್ರ ಬಹಳ ಆಶ್ಚರ್ಯಕರವಾದವು ಮತ್ತು ಸಹಜತೆಯು ಸ್ಪಷ್ಟವಿಲ್ಲದೆ ಮುಚ್ಚಿಹುದು.
|