ಮತಿಮಂದನಾಗಿ ಗತಿಯ ಕಾಣದೆ ಇದ್ದೆನಯ್ಯಾ : ಹುಟ್ಟುಗುರುಡನ ಕೈಯ ಕೋಲ ಕೊಟ್ಟು ನಡೆಸುವಂತೆ ನಡೆಸಯ್ಯಾ ಎನ್ನ. ನಿಮ್ಮ ಅಚ್ಚ ಶರಣರ ಒಕ್ಕುದ ಮಿಕ್ಕುದ ನಚ್ಚಿಸು ಮಚ್ಚಿಸು ಕೂಡಲಸಂಗಮದೇವಾ. 265