ಮತಿಯೊಳಗೊಂದು ದುರ್ಮತಿ ಹುಟ್ಟಿದ ಬಳಿಕ; ಮತಿಯ ಮರವೆಯೊಳಕೊಂಡು ಭವಕ್ಕೆ ಗುರಿಮಾಡಿ ಕೆಡಹಿತ್ತು ನೋಡಾ. ಅಖಂಡಿತವ ತಂದು ಮತಿಯೊಳಗೆ ವೇದಿಸಲು ಗತಿಗೆಟ್ಟು ನಿಂದಿತ್ತು ಗುಹೇಶ್ವರಾ.