ಮತ್ರ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯಾ ಇಲ್ಲಿ ಸಲ್ಲುವರು ಅಲ್ಲಿಯೂ ಸಲ್ಲುವರಯ್ಯಾ. ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರು ಕೂಡಲಸಂಗಮದೇವಾ. 155