ಮಥನದ ಲೀಲೆಯಲ್ಲಿ ಹುಟ್ಟುವುದೇ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಮಥನದ ಲೀಲೆಯಲ್ಲಿ ಹುಟ್ಟುವುದೇ ಬ್ರಹ್ಮವು ? ಶ್ರುತಿ ಸ್ಮೃತಿಗಳಿಗೆ ಅಳವಡದು ನೋಡಾ ! ಪೃಥ್ವಿಯೊಳಗಿಲ್ಲದ ಅಚಲವಪ್ಪ ಘನವನು
ಸಚರಾಚರದಲ್ಲಿ ಭರಿತವೆಂತೆಂಬೆ ? ಇಲ್ಲದ ಲಿಂಗವನಲ್ಲಲ್ಲಿಗೆ ಉಂಟುಮಾಡುವ ಈ ಲೀಲೆಯ ವಾರ್ತೆ ಎಲ್ಲಿಯದೊ ಗುಹೇಶ್ವರಾ ?