ಮನವಿದ್ದಲ್ಲಿಯೇ ನಿಮ್ಮ ನೆನೆಯಬೇಕು. ಬುದ್ಧಿಯಿದ್ದಲ್ಲಿಯೇ ನಿಮ್ಮ ವಿಚಾರಿಸಬೇಕಯ್ಯ. ಚಿತ್ತವಿದ್ದಲ್ಲಿಯೇ ನಿಮ್ಮ ನಿಶ್ಚಯಿಸಬೇಕು. ಅಹಂಕಾರವಿದ್ದಲ್ಲಿಯೇ ನಿಮ್ಮ ಮಮಕರಿಸಬೇಕಯ್ಯ. ಕಾಯವಿದ್ದಲ್ಲಿಯೇ ಸಾಯದ ಸಂಚವನರಿದು ಎಚ್ಚತ್ತಿರಬೇಕಯ್ಯ. ಜೀವಹಾರಿಯ ಕೆಡೆದು ಭೂಗತವಾಗಿ
ವಾಯುಪ್ರಾಣಿಯಾಗಿ ಹೋಹಾಗ
ಆಗ ಮುಕ್ತಿಯ ಬಯಸಿದರುಂಟೇ? ಚಿತ್ತ ಬುದ್ಧಿ ಅಹಂಕಾರ ಮನ ಜಾÕನ ಭಾವಂಗಳ ಮೀರಿದ
ನಿರ್ಭಾವ ಲಿಂಗೈಕ್ಯನಾದ ನಿರಾಶ್ರಯನಯ್ಯ ಮಾಹೇಶ್ವರನು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.