ಮನವೆಂಬ ಮರ್ಕಟನು ತನುವೆಂಬ ವೃಕ್ಷವನೇರಿ ಇಂದ್ರಿಯಂಗಳೆಂಬ ಶಾಖೆಶಾಖೆಗೆ ಹಾರಿ ವಿಷಯಂಗಳೆಂಬ ಹಣ್ಣು ಫಲಂಗಳ ಗ್ರಹಿಸಿ ಭವದತ್ತ ಮುಖವಾಗಿ ಹೋಗುತ್ತಿದೆ ನೋಡಾ ! ಈ ಮನವೆಂಬ ಮರ್ಕಟನ ನಿಮ್ಮ ನೆನಹೆಂಬ ಪಾಶದಲ್ಲಿ ಕಟ್ಟಿ ಎನ್ನನುಳುಹಿಕೊಳ್ಳಯ್ಯ ಅಖಂಡೇಶ್ವರಾ.