ಮರನೊಳಗಣ ಪತ್ರೆ ಫಲಂಗಳು ಮರಕಾಲವಶದಲ್ಲಿ ತೋರುವಂತೆ ಹರನೊಳಗಣ ಪ್ರಕೃತಿಸ್ವಭಾವಂಗಳು ಹರಭಾವದಿಚ್ಛೆಗೆ ತೋರುವವು. ಲೀಲೆಯಾದಡೆ ಉಮಾಪತಿ ಲೀಲೆ ತಪ್ಪಿದಡೆ ಸ್ವಯಂಭು ಗುಹೇಶ್ವರಾ.