ಮಾಟಕೂಟ ಬಸವಣ್ಣಂಗಾಯಿತ್ತು. ನೋಟಕೂಟ ಪ್ರಭುದೇವರಿಗಾಯಿತ್ತು. ಭಾವಕೂಟ ಅಜಗಣ್ಣಂಗಾಯಿತ್ತು. ಸ್ನೇಹಕೂಟ ಬಾಚಿರಾಜಂಗಾಯಿತ್ತು. ಇವರೆಲ್ಲರ ಕೂಟ ಚೆನ್ನಬಸವಣ್ಣಂಗಾಯಿತ್ತು. ಎನಗಿನ್ನಾವ ಕೂಟವಿಲ್ಲವಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.