ಮಾಣಿಕ್ಯದ ಮಂಟಪದೊಳಗೆ ಏಳು ಚಿತ್ರಕರೊಡನೆ ಮೇಳವಿಸಿದನು ಮಹಾಮಂತ್ರಂಗಳ. ಮೂಲಮಂತ್ರದ ಮೇಲೆ ಪ್ರಾಣಲಿಂಗದ ಬೆಳಗು! ವಾರಿಕಲ್ಲಲ್ಲಿ ವಜ್ರದ ಕೀಲು ಕೂಟ ಜಾಳಾಂಧರದೊಳಗೆ ಮಾಣಿಕ್ಯದ ಪ್ರತಿಬಿಂಬ ಏಳು ರತ್ನದ ಪುತ್ಥಳಿಗಳಾಟವು
ಮಣಿಮಾಲೆಗಳ ಹಾರ
ಹೊಳೆವ ಮುತ್ತಿನ ದಂಡೆ
ಎಳೆಯ ನೀಲದ ತೊಡಿಗೆಯನೆ ತೊಟ್ಟರು
ಸುಳಿದು ಮದ್ದಳೆಗಾರರೊಳು ಮೊಳಗೆ (ದಂದ?) ಮೆನಲು ಕುಣಿವ (ಪಾಡುವ) ಬಹುರೂಪಿಗಳ ನಾಟಕ
ತಾಳಧಾರಿಯ ಮೇ? ಕಹಳೆಗಾರನ ನಾದ ಕೊಳಲ ರವದೊಳಗಾಡುತ್ತ ಒಳಹೊರಗೆ ಕಾಣಬರುತ್ತದೆ ಚಿತ್ರದ ಬೊಂಬೆ! ಫಣಿಪತಿಯ ಕೋಣೆ ಸಂದಣಿಸುತ್ತಿರಲು ಗಣಮೇ? ಕೂಡಲಚೆನ್ನಸಂಗಯ್ಯನಲ್ಲಿ ಕಳಸ (ಕಳಾಸರಿ) ಪ್ರಾಣಲಿಂಗದ ಬೆಳಗಿನೊಳು ಬೆಳಗಿತ್ತು