ಮಾತು ಮಾಣಿಕ್ಯವ ನುಂಗಿ
ಜ್ಯೋತಿ ಕತ್ತಲೆಯ ನುಂಗಿ ಆಳು ಆಯ್ದನ ನುಂಗಿ ಉಗುಳಲಿನ್ನೆಂತೊರಿ ಮಥನವಿಲ್ಲದ ಸಂಗ
ಮರಣವಿಲ್ಲದ ಉದಯ
ಅಳಲಿಲ್ಲದ ಶೋಕ ಸಮರಸದಲ್ಲಿ! ಉದಯದ ಬೆಳಗನು ಮದಗಜ ಒಳಕೊಂಡು ಮಾವತಿಗನ ನುಂಗಿ ಉಗುಳದಲ್ಲಾ! ಸದಮದ ಭರಿಕೈಯೊಳಗೆ ಈರೇಳು ಭುವನವನು ಒದರಿ ಹಾಯ್ಕಿ ತಾನೆ ನಿಂದುದಲ್ಲಾ! ಸದಮಲಜಾÕನಸಂಪನ್ನ ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣಂಗೆ ಸ್ವಯವಾಯಿತ್ತು