ಮಾರಿ ಮಸಣಿಯೆಂಬವು ಬೇರಿಲ್ಲ


Pages   (key to Page Status)   

ಮಾರಿ ಮಸಣಿಯೆಂಬವು ಬೇರಿಲ್ಲ ಕಾಣಿರೋ. ಮಾರಿಯೆಂಬುದೇನು ಕಂಗಳು ತಪ್ಪಿ ನೋಡಿದಡೆ ಮಾರಿ
ನಾಲಗೆ ತಪ್ಪಿ ನುಡಿದಡೆ ಮಾರಿ
ನಮ್ಮ ಕೂಡಲಸಂಗಮದೇವರ ನೆನಹ ಮರೆದಡೆ ಮಾರಿ.