ಮುಗಿಲನೆಚ್ಚ ಕೋಲು ಮುಗಿಲ ಮುಟ್ಟದೆ ಮರಳಿ ಬಿದ್ದಂತೆ ಏರಿ ಜಾರಿ ಬೀಳುವ ಪ್ರಾಣಿಗಳು ಅತ್ತಲಾರು ಬಲ್ಲರೊ ? ಹೊನ್ನು ಹೆಣ್ಣು ಮಣ್ಣೆಂಬ ಬಲೆಯಲ್ಲಿ ಬಿದ್ದವರು ಅತ್ತಲಾರು ಬಲ್ಲರೊ ? ಗುಹೇಶ್ವರಾ ನಿಮ್ಮ ಬಂದಿವಿಡಿದು ಸಯಬಂದಿಯಾದೆನು !