ಮುಟ್ಟದ ಮುನ್ನ ಗುರುವುಂಟು ಲಿಂಗವುಂಟು ಜಂಗಮವುಂಟು ಪಾದೋದಕವುಂಟು ಪ್ರಸಾದವುಂಟು. ಮುಟ್ಟಿದ ಬಳಿಕ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ. ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ಸ್ವಯವಲ್ಲದೆ ಪರವಿಲ್ಲವೆಂಬುದು ನಿನ್ನಲ್ಲಿ ಕಾಣಬಂದಿತ್ತು ಕಾಣಾ ಪ್ರಭುವೆ