ಮುದ್ದ ನೋಡಿ ಮುಖವ ನೋಡಿ ಮೊಲೆಯ ನೋಡಿ ಮುಡಿಯ ನೋಡಿ ಕರಗಿ ಕೊರಗುವುದೆನ್ನ ಮನ ಲಿಂಗದೇವನ ಧ್ಯಾನವೆಂದಡೆ ಕರಗಿ ಕೊರಗದೆನ್ನ ಮನ. ಆನು ಭಕ್ತನೆಂಬಡೆ ಲಜ್ಜೆಯಿಲ್ಲ ನೋಡಯ್ಯಾ. ಎನ್ನ ತಂದೆ ಕೂಡಲಸಂಗಮದೇವಯ್ಯ ಒಲಿದು ಒಪ್ಪಗೊಂಡನಾದಡೆ ಆನು ಚೆಂಗಳೆಯ ಬಸುರಲ್ಲಿ ಬಾರದಿಹೆನೆ