ಮುನ್ನಿನ ಆದ್ಯರ ಪಥಂಗಳು ಇನ್ನಾರಿಗೂ ಅಳವಡವು ನೋಡಾ. ಬಲ್ಲೆನಾಗಿ ಒಲ್ಲೆನು ಅವರ ಸಲ್ಲರು ಶಿವಪಥಕ್ಕೆ. ಒಳ್ಳಿಹ ಮೈಲಾರನ ಸಿಂಗಾರದಂತೆ ವೇಶಿಯ ಬಾಯ ಎಂಜಲನುಂಬ ದಾಸಿಯ ಸಂಸಾರದಂತೆ ಕೂಡಲಸಂಗನ ಶರಣರನರಿಯದೆ ಉಳಿದ ಭಂಗಿತರ.