ಮುಸುರೆಯ ಮಡಕೆಯ ನೊಣ ಮುತ್ತಿಕೊಂಡಿಪ್ಪಂತೆ ಕಸವುಳ್ಳ ಹೊಲದಲ್ಲಿ ಪಶುಗಳು ನೆರೆದಿಪ್ಪಂತೆ ಅನ್ನ ಉದಕ ಹೊನ್ನು ವಸ್ತ್ರವುಳ್ಳ ದೊರೆಯ ಬಾಗಿಲಲ್ಲಿ ಬಹುಭಾಷೆಯ ಹಿರಿಯರುಗಳು ನೆರೆದುಕೊಂಡಿಪ್ಪರು. ಗುಹೇಶ್ವರಾ ನಿಮ್ಮ ಶರಣರು ಆಶಾಪಾಶವಿರಹಿತರು !