ಮೃಗದ ಸಂಚದ ತಲೆಯಲ್ಲಿ ಜಗದ ಬಯಲ ನಾಲಗೆ! ಅಘಹರನ ದೃಷ್ಟಿಯಲ್ಲಿ ಬೊಬ್ಬೆಯಬ್ಬರವಿದೇನೊ? ಗಗನದ ವಾಯುವ ಬೆಂಬಳಿವಿಡಿದು ಅಗ್ನಿಯಪ್ಪಿನ ಕಳೆಯಲ್ಲಿ ಮೇದಿನಿ ಅಡಗಿತ್ತು ನೋಡಾ! ಮನದ ಬಗೆಯನವಗ್ರಹಿಸಿ ಜಗದ ಬಣ್ಣವ ನುಂಗಿ ಗುಹೇಶ್ವರನೆಂಬ ಲಿಂಗದಲ್ಲಿ ನಿರಾಳವಾಯಿತ್ತು.