ಮೆಲ್ಲಮೆಲ್ಲನೆ ಭಕ್ತ, ಮೆಲ್ಲಮೆಲ್ಲನೆ



Pages   (key to Page Status)   


ಮೆಲ್ಲಮೆಲ್ಲನೆ ಭಕ್ತ
ಮೆಲ್ಲಮೆಲ್ಲನೆ ಮಾಹೇಶ್ವರ
ಮೆಲ್ಲಮೆಲ್ಲನೆ ಪ್ರಸಾದಿ
ಮೆಲ್ಲಮೆಲ್ಲನೆ ಪ್ರಾಣಲಿಂಗಿ
ಮೆಲ್ಲಮೆಲ್ಲನೆ ಶರಣ
ಮೆಲ್ಲಮೆಲ್ಲನೆ ಐಕ್ಯರಾದೆವೆಂಬರು_ ನಿಮ್ಮ ಶರಣರು ತಾವೇನು ಮರುಜವಣಿಯ ಕೊಂಡರೆ ? ಅಮೃತಸೇವನೆಯ ಮಾಡಿದರೆ ? ಆವ ಸ್ಥಲದಲ್ಲಿ ನಿಂದರೂ ಆ ಸ್ಥಲದಲ್ಲಿ ಷಡುಸ್ಥಲ ಅಳವಡದಿದ್ದರೆ
ಆ ಭಕ್ತಿಯ ಬಾಯಲ್ಲಿ ಹುಡಿಯ ಹೊಯ್ದು ಹೋಗುವೆನೆಂದ ಕೂಡಲಚೆನ್ನಸಂಗಮದೇವರ