Pages   (key to Page Status)   


ಮೇರುವ ಸಾರಿದ ಕಾಗೆ ಹೊಂಬಣ್ಣವಾಗದಿದ್ದಡೆ
ಆ ಮೇರುವಿಂದತ್ತಣ ಹುಲುಮೊರಡಿಯೆ ಸಾಲದೆ ? ದೇವಾ
ನಿಮ್ಮ ಪೂಜಿಸಿ ಧಾವತಿಗೊಂಬಡೆ
ಆ ಧಾವತಿಯಿಂದ ಮುನ್ನಿನ ವಿದ್ಥಿ[ಯೆ] ಸಾಲದೆ ? ಗುಹೇಶ್ವರಾ
ನಿಮ್ಮ ಪೂಜಿಸಿ ಸಾವಡೆ
ನಿಮ್ಮಿಂದ ಹೊರಗಣ ಜನವೆ ಸಾಲದೆ ?