ಕನ್ನಡ ವರ್ಣಮಾಲೆಯ ಒಂಬತ್ತನೆಯ ಅಕ್ಷರ. ಹ್ರಸ್ವ ಸ್ವರ. ಸಂಸ್ಕøತದಲ್ಲಿ ಹ್ರಸ್ವ ಎಕಾರವಿಲ್ಲವಾಗಿ ಬ್ರಾಹ್ಮೀ ಲಿಪಿಯ ಲೇಖಗಳಲ್ಲಿ ಈ ಅಕ್ಷರದ ರೂಪ ದೊರೆಯದು. ಕನ್ನಡದಲ್ಲಿ ಈ ಲಿಪಿ ಮತ್ತು ಉಚ್ಛಾರಣೆ ಬಳಕೆಯಲ್ಲಿದ್ದರೂ ಪ್ರಾಚೀನ ಕನ್ನಡದ ಶಾಸನಗಳಲ್ಲಿ ಎ ಕಾರಕ್ಕೆ ಬದಲು ಏ ಕಾರವನ್ನೇ ಬಳಸಲಾಗಿದೆ. ಬಹುಶಃ ಇದು ಸಂಸ್ಕøತ ಪ್ರಭಾವದಿಂದ ಆಗಿರಬಹುದು. ಬರವಣಿಗೆಯಲ್ಲಿ ಒಂದೇ ಅಕ್ಷರ ಕಂಡುಬಂದರೂ ಸಂದರ್ಭಕ್ಕೆ ತಕ್ಕಂತೆ ಹ್ರಸ್ವವಾಗಿಯೊ ದೀರ್ಘವಾಗಿಯೊ ಉಚ್ಛರಿಸುವ ವಾಡಿಕೆ ಇತ್ತು. ಲಿಪಿಯ ದೃಷ್ಟಿಯಿಂದ ಈ ಅಕ್ಷರದ ಹ್ರಸ್ವ ಮತ್ತು ದೀರ್ಘ ರೂಪಗಳಿಗಿರುವ ವ್ಯತ್ಯಾಸ ಯಾವಾಗ ರೂಢಿಗೆ ಬಂತು ಎಂದು ಹೇಳುವುದು ಕಷ್ಟ. ಕ್ರಿ.ಶ.15ನೆಯ ಶತಮಾನದ ವಿಜಯನಗರ ಕಾಲದಲ್ಲಿ ವ್ಯಂಜನಾಕ್ಷರಗಳೊಂದಿಗಿನ ಎ ವರ್ಣದ ರೂಪ ಹೇಗಿತ್ತೆಂಬುದನ್ನು ಚಿತ್ರದಲ್ಲಿ ತೋರಿಸಿದೆ.

ಈ ಅಕ್ಷರ ಪೂರ್ವ ಅಗೋಲ ಅರ್ಧ ಸಂವೃತ ಹ್ರಸ್ವಸ್ವರವನ್ನು ಸೂಚಿಸುತ್ತದೆ.

(ಎ.ವಿ.ಎನ್.)