ಸ್ನೇಹ ಮಾಡಬೇಕಿಂಥವಳ!

(ಮೋಹದ ಹೆಂಡತಿ ಸತ್ತ ಬಳಿಕ ಇಂದ ಪುನರ್ನಿರ್ದೇಶಿತ)

ಸ್ನೇಹ ಮಾಡಬೇಕಿಂಥವಳ!ಒಳ್ಳೇ ಮೋಹದಿಂದಲಿ ಬಂದು - ಕೂಡುವಂಥವಳ

ಸಂಪಾದಿಸಿ
  • ಹೆಂಡತಿಯ ಸಾವಿನ ನಂತರದ ನೋವಿನ ಹಢಿರಬಹುದು; ಇದರ ಮುಂದಿನ ಪದ ನೋಡಿ:ಮೋಹದ ಹೆಂಡತಿ ಸತ್ತ ಬಳಿಕ

ಸ್ನೇಹ ಮಾಡಬೇಕಿಂಥವಳ! - ಒಳ್ಳೇ
ಮೋಹದಿಂದಲಿ ಬಂದು - ಕೂಡುವಂಥವಳ

ಚಂದ್ರಗಾವಿ ಶೀರೀನುಟ್ಟು - ದಿವ್ಯ
ಕೆಂದಾವರಿ ಮಗ್ಗಿ ಕುಪ್ಪಸ ತೊಟ್ಟು
ಬಂದಳು ಮಂದಿರ ಬಿಟ್ಟು - ನಾಲ್ಕು
ಮಂದಿಯೊಳು ಬಂದು ನಾಚುವಳೆಷ್ಟು!

ಅರಗಿಳಿ ಸಮ ಇವಳ ನುಡಿಯು - ಚೆಲ್ವ
ಸುಳಿನಾಭಿ ಕುಚಕುಂಭಗಳ ಹಂಸನಡೆಯು
ಥಳಥಳಿಸುವ ತೋಳ್ತೊಡೆಯು - ಒಳ್ಳೇ
ಬಳುಬಳುಕುವ ನಡುವು ತಳಿರಡಿಯು.

ಮುಕ್ತ ಕಾಮಿನಿ ಎನ್ನ ಕಾಡಿ - ಮೋಹ
ಮತ್ತ ಸುರತಸುಖ ಸುಡುವಂತೆ ಕೂಡಿ
ಹುಟ್ಟನ್ನೇ ಕಳೆದಳೊ ಖೋಡಿ - ದೇವ
ಶಿಶುನಾಳಾಧೀಶನ ಪಾದಕೆ ದೂಡಿ!

ಮೋಹದ ಹೆಂಡತಿ ಸತ್ತ ಬಳಿಕ

ಸಂಪಾದಿಸಿ

ಮೋಹದ ಹೆಂಡತಿ ಸತ್ತ ಬಳಿಕ
ಮಾವನ ಮನೆಯ ಹಂಗಿನ್ನ್ಯಾಕೋ ||ಪಲ್ಲ||
ಸಾವು ನೋವಿಗೆ ತರುವ ಬೀಗನ
ಮಾತಿನ ಹಂಗೊಂದೆನಗ್ಯಾಕೋ ||ಅನುಪಲ್ಲ||

ಖಂಡವನದಿ ಸೋಂಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವದು ಭಯವ್ಯಾಕೋ
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾಡುವದ್ಯಾಕೋ ||೧||

ತಂದೆ ಗುರುಗೋವಿಂದನ ಸೇವಕ
ಕುಂದಗೋಳಕೆ ಬಂದು ನಿಂತಾನ್ಯಾಕೋ
ಬಂಧುರ ಶಿಶುನಾಳಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನಗಳ್ಯಾಕೋ ||೨||

ಶರೀಫ ಸಾಹಿತ್ಯ

ಉಲ್ಲೇಖ

ಸಂಪಾದಿಸಿ
  • ಶಿಶುನಾಳ ಶರೀಫರ ಪದಗಳು -ಅನಾಮಿಕ