ಯದಾ ಶಿವಕಲಾಯುಕ್ತಂ ಲಿಂಗಂ



Pages   (key to Page Status)   


ಯದಾ ಶಿವಕಲಾಯುಕ್ತಂ ಲಿಂಗಂ ದದ್ಯಾನ್ಮಹಾಗುರುಃ ತದಾರಾಭ್ಯಂ ಶಿವಸ್ತತ್ರ ತಿಷ*ತ್ಯಾಹ್ವಾನಮತ್ರ ಕಿಂ ಸುಸಂಸ್ಕೃತೇಷು ಲಿಂಗೇಷು ಸದಾ ಸನ್ನಿಹಿತಃ ಶಿವಃ ತಥಾsಹ್ವಾನಂ ನ ಕರ್ತವ್ಯಂ ಪ್ರತಿಪತ್ತಿವಿರೋಧತಃ ನಾಹ್ವಾನಂ ನಾ ವಿಸರ್ಗಂ ಚೆ ಸ್ವೇಷ್ಟಲಿಂಗೇ ಕಾರಯೇತ್ ಲಿಂಗನಿಷಾ*ಪರೋ ನಿತ್ಯಮಿತಿ ಶಾಸ್ತ್ರವಿನಿಶ್ಚಯಃ ಆಹ್ವಾನಕ್ಕೋಸ್ಕರವಾಗಿ ಎಲ್ಲಿರ್ದನು ? ಈರೇಳು ಭುವನ ಹದಿನಾಲ್ಕು ಲೋಕವನೊಡಲುಗೊಂಡಿಪ್ಪ ದಿವ್ಯವಸ್ತು ಮತ್ತೆ ವಿಸರ್ಜಿಸಿ ಬಿಡುವಾಗ ಎಲ್ಲಿರ್ದನು ? ಮುಳ್ಳೂರೆ ತೆರಹಿಲ್ಲದಂತಿಪ್ಪ ಅಖಂಡವಸ್ತು ! ಆಕಾಶಂ ಲಿಂಗಮಿತ್ಯಾಹುಃ ಪೃಥಿವೀ ತಸ್ಯ ಪೀಠಿಕಾ ಆಲಯಂ ಸರ್ವಭೂತಾನಾಂ ಅಯನಂ ಲಿಂಗಮುಚ್ಯತೇ ಲಿಂಗಮಧ್ಯೇ ಜಗತ್‍ಸರ್ವಂ ತ್ರೈಲೋಕ್ಯಂ ಸಚರಾಚರಂ ಲಿಂಗಬಾಹ್ಯಾತ್ಪರಂ ನಾಸ್ತಿ ತಸ್ಮಾಲ್ಲಿಂಗಂ ಪ್ರಪೂಜಯೇತ್ ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ನಾದಬಿಂದುಕಲಾತೀತಂ ಗುರುಣಾ ಲಿಂಗಮುದ್ಭವಂ ವೇದಾದಿನಾಮ ನಿರ್ನಾಮ ಮಹತ್ವಂ ಮಮ ರೂಪಯೋಃ ಗುರೂಕ್ತಮಂತ್ರಮಾರ್ಗೇಣ ಇಷ್ಟಲಿಂಗಂ ತು ಶಾಂಕರಿ ಇಂತೆಂದುದಾಗಿ
ಬರಿಯ ಮಾತಿನ ಬಳಕೆಯ ತೂತುಜ್ಞಾನವ ಬಿಟ್ಟು ನೆಟ್ಟನೆ ತನ್ನ ಕರಸ್ಥಲದೊಳ್ ಒಪ್ಪುತಿರ್ಪ ಇಷ್ಟಲಿಂಗವ ದೃಷ್ಟಿಸಿ ನೋಡಲು ಅಲ್ಲಿ ತನ್ನ ಮನಕ್ಕೆ ಮನ ಸಂಧಾನವಾದ ದಿವ್ಯ ನಿಶ್ಚಯ ಒದಗಿ
ಆ ದಿವ್ಯ ನಿಶ್ಚಯದಿಂದ ವ್ಯಾಕುಳವಡಗಿ ಅದ್ವೈತವಪ್ಪುದು. ಅದು ಕಾರಣ_ನಮ್ಮ ಕೂಡಲಚೆನ್ನಸಂಗಯ್ಯನ ಶರಣರು ಆಹ್ವಾನ_ವಿಸರ್ಜನವೆಂಬ ಉಭಯ ಜಡತೆಯ ಬಿಟ್ಟು ತಮ್ಮ ತಮ್ಮ ಕರಸ್ಥಲದಲ್ಲಿ ನಿಶ್ಚಯಿಸಿದರಾಗಿ ಸ್ವಯಲಿಂಗವಾದರು ಕಾಣಿರೋ !