ಯಾಕೆ ಚಿಂತಿಸುತಿದ್ದಿ ಕೋತಿಮನವೆ

ಯಾಕೆ ಚಿಂತಿಸುತಿದ್ದಿ ಕೋತಿಮನವೆ ಸಂಪಾದಿಸಿ

  • ರಾಗ: ಭೈರವಿ, ತಾಳ: ಝಂಪೆ

ಯಾಕೆ ಚಿಂತಿಸುತಿದ್ದಿ ಕೋತಿಮನವೆ
ಲೋಕನಾಥನ ನೆನೆದು ಸುಖಿಯಾಗು ಮನವೆ || ಪ||

ಹುಟ್ಟುವಾಗಾಪತ್ತಿಗಾರು ಚಿಂತಿಸಿದವರು
ಕಟ್ಟಕಡೆಯಲಿ ಲಯಕೆ ಯಾರ ಚಿಂತೆ
ನಟ್ಟನಡುವಿನ ಬಾಳಿಗೇಕೆ ಚಿಂತಿಸುತಿರುವೆ
ಹುಟ್ಟಿದವರಿಗೆ ಮೂರು ಬಟ್ಟಿಲ್ಲವೆ ಮರುಳೆ || ೨ ||

ನವಿಲಿಗೆ ಚಿತ್ರಪತ್ರವನಾರು ಬರೆದವರು
ಪವಳದ ಲತೆಗೆ ಕೆಂಪಿಟ್ಟವರು ಯಾರು
ಸವಿಮಾತಿನರಗಿಣಿಗೆ ಹಸುರು ಬಳಿದವರಾರು
ಅವ ಮಾಡಿದವ ನಮ್ಮ ಮರೆತಿಹನೆ ಮರುಳೆ || ೩ ||

ಬಸುರೊಳಗೆ ಶಿಶುವನು ಅದಾರು ಸಲಹಿದವರು
ವಸುಧೆಯನು ಬಸುರೊಳಗೆ ಇಟ್ಟವರು ಯಾರು
ಹಸಗೆಡದೆ ನಮ್ಮ ಶ್ರೀ ಪುರಂದರವಿಠಲನ
ಬಿಸಜಪಾದವ ನಂಬಿ ಸುಖಿಯಾಗು ಮರುಳೆ || ೪ || [೧]

  • ರಚನೆ:- ಪುರಂದರದಾಸರು.

ನೋಡಿ ಸಂಪಾದಿಸಿ

ಪರಿವಿಡಿ ಸಂಪಾದಿಸಿ

ಕನ್ನಡ ವಿಕಿಸೋರ್ಸ್ ಸಂಪಾದಿಸಿ

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ ಸಂಪಾದಿಸಿ

  1. ದಾಸವಾಣಿ