ಯಾಕೆ ನಿರ್ದಯನಾದೆ ಎಲೊ ದೇವನೆ

ಯಾಕೆ ನಿರ್ದಯನಾದೆ ಎಲೆ ದೇವನೆ

ಸಂಪಾದಿಸಿ
ರಾಗ: ಕಾಂಬೋದಿ ತಾಳ: ಝಂಪೆ

ಯಾಕೆ ನಿರ್ದಯನಾದೆ ಎಲೊ ದೇವನೆ
ಶ್ರೀಕಾಂತ ಎನಮೇಲೆ ಎಳ್ಳಷ್ಟು ದಯವಿಲ್ಲ || ಪ||

ಕಂಗೆಟ್ಟು ಕಂಭದಲಿ ಒಡೆದು ಬಳಲಿ ಬಂದು
ಹಿಂಗದೆ ಪ್ರಹ್ಲಾದನಪ್ಪಿಕೊಂಡೆ
ಮಂಗಳ ಪದವಿತ್ತು ಮನ್ನಿಸಿದೆ ಅವ ನಿನಗೆ
ಭಂಗಾರವೆಷ್ಟು ಕೊಟ್ಟನು ಪೇಳೊ ಹರಿಯೆ || ೧|| -ಯಾಕೆ ನಿರ್ದಯನಾದೆ ಎಲೊ ದೇವನೆ

ಸಿರಿದೇವಿಗೆ ಹೇಳದೆ ಸೆರಗು ಸಂವರಿಸದೆ
ಗರುಡನ ಮೇಲೆ ಗಮನವಾಗದೆ
ಭರದಿಂದ ನೀ ಬಂದು ಕರಿಯನುದ್ಧರಿಸಿದೆ
ಕರಿರಾಜ ಎಷ್ಟು ಕನಕವ ಕೊಟ್ಟ ಹರಿಯೆ || ೨ || -ಯಾಕೆ ನಿರ್ದಯನಾದೆ ಎಲೊ ದೇವನೆ

ಅಜಮಿಳನು ಅಣ್ಣನೆ ವಿಭೀಷಣನು ತಮ್ಮನೆ
ನಿಜದಿ ರುಕ್ಮಾಂಗದನು ನಿನ್ನ ಮೊಮ್ಮಗನೇ
ಭಜನೆಗವರೇ ಹಿತರೆ ನಾ ನಿನಗೆ ಅನ್ಯನೆ
ತ್ರಿಜಗಪತಿ ಸಲಹೆನ್ನ ಪುರಂದರವಿಠಲ || ೩ || - ಯಾಕೆ ನಿರ್ದಯನಾದೆ ಎಲೊ ದೇವನೆ[]

  • ರಚನೆ: ಪುರಂದರದಾಸರು.

ಪರಿವಿಡಿ

ಸಂಪಾದಿಸಿ

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ

ಸಂಪಾದಿಸಿ
  1. ದಾಸವಾಣಿ