ಯುವತಿಯರ ವ್ಯವಹಾರವೆಂಬ ವಿಕಳತೆ ಹತ್ತಿ ಯೋಗದ ಸಮತೆ ಸಡಿಲಿತ್ತು ನೋಡಾ. ಸತ್ಯ ಸತ್ತಿತ್ತು ಭಕ್ತಿಯರತಿತ್ತು. ಮಾಯಾವಿಲಾಸವೆಂಬ ಮೃತ್ಯು ಮುಟ್ಟದ ಮುನ್ನ ನಿಮ್ಮತ್ತ ಹಿಡಿದು ಎತ್ತಿಕೊಳ್ಳಯ್ಯಾ ಮಹಾಲಿಂಗ ಗುರು ಶಿವಸಿದ್ಧೇಶ್ವರ ಪ್ರಭುವೇ.