ಯೋಗ ವಿಯೋಗವೆಂಬ ಹೊಲಬ ಬಲ್ಲವರನಾರನೂ ಕಾಣೆನು. ನವನಾಳದ ಸುಳುಹ ತಿಳಿದಹೆನೆಂಬುದು ಯೋಗವಲ್ಲ. ಐವತ್ತೆರಡಕ್ಷರದ ಶಾಸನವ ತಿಳಿದು ನೋಡಿ
ಹೃದಯಕಮಲಕರ್ಣಿಕೆಯಲ್ಲಿ ಸಿಲುಕಿದೆನೆಂಬುದು ಯೋಗವಲ್ಲ. ಬಹಿರಂಗವೆಂಬಡೆ ಕ್ರಿಯಾರಹಿತ (ಬದ್ಧ?) ಅಂತರಂಗವೆಂಬಡೆ ವಾಙ್ಮನೋತೀತ ಗುಹೇಶ್ವರನೆಂಬ ಲಿಂಗವು ಷಡುಚಕ್ರದ ಮೇಲಿಲ್ಲ ಕಾಣಾ ಸಿದ್ಧರಾಮಯ್ಯಾ.