ರಕ್ಷಿಸು ಲೋಕನಾಯಕನೆ ರಕ್ಷಿಸು
ಸಂಪಾದಿಸಿರಾಗ: ಶಂಕರಾಭರಣ; ತಾಳ: ಅಟ್ಟ;
ಎಷ್ಟೆಷ್ಟು ಜನ್ಮವ ಕಳೆದೆನೊ
ಇನ್ನೆಷ್ಟು ಜನ್ಮವ ಕಳೆವೆನೊ
ಕಷ್ಟವ ಪಡಲಾರೆ ಕೃಷ್ಣ ಕೃಪೆಯನಿಟ್ಟು
ಇಷ್ಟವ ಪಾಲಿಸೊ ಇಭರಾಜವರದನೆ ||೧||
ಬಾಲತನದಿ ಬಹು ನೊಂದೆನೊ ನಾನಾ
ಲೀಲೆಯಿಂದಲಿ ಕಾಲಕಳೆದೆನೊ
ಲೋಲಲೋಚನ ಎನ್ನ ಮೊರೆ ಕೇಳುತ ಬೇಗ
ಜಾಲವ ಮಾಡದೆ ಪಾಲಿಸೊ ನರಹರಿ || ೨ ||
ಮುದುಕನಾಗಿ ಚಿಂತೆಪಡುವೆನೊ ನಾ
ಕದಡು ದುಃಖ ಪಡಲಾರೆನೊ
ಉದಧಿಶಯನ ಶ್ರೀ ಪುರಂದರವಿಠಲ
ಮುದದಿಂದ ರಕ್ಷಿಸೊ ಖಗರಾಜ ಗಮನ || ೩||[೧]
---೦---
ರಚನೆ ಪುರಂದರದಾಸರು.
ನೋಡಿ
ಸಂಪಾದಿಸಿಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಪುರಂದರದಾಸರು
ಪರಿವಿಡಿ
ಸಂಪಾದಿಸಿಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ