ರತ್ನದೀಪ್ತಿಯಾದಡೇನು ? ಬಂಧಿಸಿದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ರತ್ನದೀಪ್ತಿಯಾದಡೇನು ? ಬಂಧಿಸಿದ ಕುಂದಣದಲ್ಲಿಯೆ ಸಂದಿರಬೇಕು. ಸ್ವಾದುರಸದ ರುಚಿಯನೀವ ಫಲವೆಂದಡೇನು ವೃಕ್ಷವಿಲ್ಲದನ್ನಕ್ಕರ ? ಚಿತ್ರಸೌಂದರ್ಯ ನೋಟಕೆ ಸುಖವೆಂದಡೇನು ಭಿತ್ತಿಯ ಪಟ ಮುಖ್ಯಸ್ಥಾನದಲ್ಲಿಲ್ಲದನ್ನಕ್ಕರ ? ಅಂಜನ ಸಿದ್ಧಿಯಿಂ ನಿಧಾನವ ಕಂಡಡೇನು ಸಾಧನ ಕ್ರೀಯಿಂದ ಸಾಧ್ಯವ ಮಾಡಿಕೊಳ್ಳದನ್ನಕ್ಕರ ? ಇದು ಕಾರಣ_ ಕಾಯದ ಕರಸ್ಥಲಕ್ಕೆ ಇಷ್ಟಲಿಂಗಸಾಹಿತ್ಯವಿಲ್ಲದಿದ್ದಡೆ
ನಿರವಯವಾದ ಜ್ಞಾನಯೋಗ ಕೂಟ ಸಾಧ್ಯವಾಗದು. ಇದು ಕಾರಣ_ ಕ್ರಿಯಾಲಿಂಗಸಂಬಂಧವೆ ಭಕ್ತಂಗೆ ಮತವು
ಇದೇ ಕಾರಣ ದೇಹಶೌಚವು ! ನಮ್ಮ ಗುಹೇಶ್ವರನ ಶರಣರ ಮನ ಒಪ್ಪುವಂತೆ ಸಿದ್ಧರಾಮಯ್ಯಂಗೆ ಲಿಂಗಸಾಹಿತ್ಯವ ಮಾಡಾ ಚೆನ್ನಬಸವಣ್ಣಾ.