ರಾಘವೆಂದ್ರ ಹಾಡು- ವಾರ ಬಂತಮ್ಮ ಗುರುವಾರ

Title
Source _empty_
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಗುರುವಾರ ಬಂತಮ್ಮ ಗುರುರಾಯರ ನೆನೆಯಮ್ಮ

ಗುರುವಾರ ಬಂತಮ್ಮ ಗುರುರಾಯರ ನೆನೆಯಮ್ಮ

ಸ್ಮರಣೆ ಮಾತ್ರದಲಿ ಕ್ಲೇಶ ಕಳೆದು ಸದ್ಗತಿಯ ಕೊಡುವನಮ್ಮ


ವಾರ ಬಂತಮ್ಮ ಗುರುವಾರ ಬಂತಮ್ಮ

ರಾಯರ ನೆನೆಯಮ್ಮ ಗುರುರಾಯರ ನೆನೆಯಮ್ಮ


ಯೋಗಿ ಬರುವನಮ್ಮ ಶುಭ ಯೋಗ ಬರುವುದಮ್ಮ

ರಾಘವೇಂದ್ರ ಗುರುರಾಯ ಬಂದು ಭವ ರೋಗ ಕಳೆವನಮ್ಮ

ವಾರ ಬಂತಮ್ಮ ಗುರುವಾರ ಬನ್ಥಮ್ಮ

ರಾಯರ ನೆನೆಯಮ್ಮ ಗುರುರಾಯರ ನೆನೆಯಮ್ಮ


ಮನವ ತೊಳೆಯಿರಮ್ಮ ಭಕ್ತಿಯ ಮನೆಯ ಹಾಕಿರಮ್ಮ

ದ್ಯಾನ ದಿನ್ದ ಕರೆದಾಗ ಬಂದು ಒಳಗಣ ಬೆರೆವನಮ್ಮ

ವಾರ ಬಂತಮ್ಮ ಗುರುವಾರ ಬನ್ಥಮ್ಮ

ರಾಯರ ನೆನೆಯಮ್ಮ ಗುರುರಾಯರ ನೆನೆಯಮ್ಮ


ಕೋಪ ಅರಿಯನಮ್ಮ ಯಾರನು ದೂರ ತಲ್ಲನಮ್ಮ

ಪ್ರೀತಿ ಮಾತಿಗೆ ಸೋತು ಬರುವ ಮಗುವಂಥೆ ಕಾಣಿರಮ್ಮ

ವಾರ ಬಂತಮ್ಮ ಗುರುವಾರ ಬಂತಮ್ಮ

ರಾಯರ ನೆನೆಯಮ್ಮ ಗುರುರಾಯರ ನೆನೆಯಮ್ಮ


ಹಿಂದೆ ಬರುವನಮ್ಮ ರಾಯರ ನೆರಳಿನಂತೆ ಹನುಮ

ಹನುಮನಿದೆಡೆ ರಾಮನಿದ್ದು ನಿಜ ಮುಕ್ತಿ ಕೊಡುವನಮ್ಮ

ವಾರ ಬಂತಮ್ಮ ಗುರುವಾರ ಬಂತಮ್ಮ

ರಾಯರ ನೆನೆಯಮ್ಮ ಗುರುರಾಯರ ನೆನೆಯಮ್ಮ

ಸ್ಮರಣೆ ಮಾತ್ರದಲಿ ಕ್ಲೇಶ ಕಳೆದು ಸದ್ಗತಿಯ ಕೊಡುವನಮ್ಮ