ಲಿಂಗಕ್ಕಲ್ಲದೆ ಮಾಡೆನೀ ಮನವನು ಜಂಗಮಕ್ಕಲ್ಲದೆ ಮಾಡೆನೀ ಧನವನು ಪ್ರಸಾದಕ್ಕಲ್ಲದೆ ಮಾಡೆನೀ ತನುವನು ಲಿಂಗಜಂಗಮಪ್ರಸಾದಕ್ಕಲ್ಲದೆ ಬಾಯ್ದೆರೆಯೆನೆಂಬುದೆನ್ನ ಭಾಷೆ. ಅನರ್ಪಿತವಾದಡೆ ತಪ್ಪೆನ್ನದು ಮೂಗ ಕೊಯಿ ಕೂಡಲಸಂಗಮದೇವಾ.